Asianet Suvarna News Asianet Suvarna News

Breaking: ತಿಹಾರ್‌ ಜೈಲಿನಿಂದ ಹೊರಬಂದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌!

ಅಕ್ರಮ ಮದ್ಯ ನೀತಿ ಪ್ರಕರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ ಶುಕ್ರವಾರ, ಸುಪ್ರೀಂ ಕೋರ್ಟ್‌ ಮಧ್ಯಂತರ ಜಾಮೀನು ನೀಡಿತ್ತು. ಸಂಜೆಯ ವೇಳೆಗೆ ಅವರು ತಿಹಾರ್‌ ಜೈಲಿನಿಂದ ಹೊರಬಂದಿದ್ದಾರೆ.

Delhi CM Arvind Kejriwal released from Tihar Jail after being granted interim bail san
Author
First Published May 10, 2024, 7:03 PM IST

ನವದೆಹಲಿ (ಮೇ. 10):  ಅಕ್ರಮ ಅಬಕಾರಿ ನೀತಿ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ದೆಹಲಿಯ ತಿಹಾರ್ ಜೈಲಿನಿಂದ ಬಿಡುಗಡೆ ಶುಕ್ರವಾರ ಸಂಜೆ ಬಿಡುಗಡೆಯಾದರು. ಸುಪ್ರೀಂ ಕೋರ್ಟ್ ಜೂನ್ 1ರವರೆಗೆ ಅವರಿಗೆ ಮಧ್ಯಂತರ ಜಾಮೀನು ನೀಡಿದೆ. ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಲೋಕಸಭೆ ಚುನಾವಣೆಯ ಪ್ರಚಾರಕ್ಕಾಗಿ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ಕೆಲವೇ ಗಂಟೆಗಳ ನಂತರ ಶುಕ್ರವಾರ ಸಂಜೆ ತಿಹಾರ್ ಜೈಲಿನಿಂದ ಬಿಡುಗಡೆಗೊಂಡರು. ಮೂಲಗಳ ಪ್ರಕಾರ, ಮುಖ್ಯಮಂತ್ರಿಗಳು ತಮ್ಮ ಅಧಿಕೃತ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿ ಅವರನ್ನು ಅವರ ಕುಟುಂಬ, ಎಎಪಿ ನಾಯಕರು ಮತ್ತು ಪಕ್ಷದ ಬೆಂಬಲಿಗರು ಭರ್ಜರಿಯಾಗಿ ಸ್ವಾಗತಿಸಲಿದ್ದಾರೆ. ರದ್ದುಗೊಂಡಿರುವ ಮದ್ಯದ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ಜೂನ್ 2 ರಂದು ತಿಹಾರ್ ಜೈಲು ಅಧಿಕಾರಿಗಳಿಗೆ ಶರಣಾಗುವಂತೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಸೂಚಿಸಿದೆ.

ಅಂದಾಜು 50 ದಿನಗಳ ಕಾಲ ಅವರು ತಿಹಾರ್‌ ಜೈಲಿನಲ್ಲಿ ಬಂಧಿಯಾಗಿದ್ದರು. ಈ ವೇಳೆ ಅವರು ಜೈಲಿನಿಂದಲೇ ತಮ್ಮ ಸರ್ಕಾರವನ್ನು ನಡೆಸಿದ್ದರು. ಮಧ್ಯಂತರ ಜಾಮೀನು ನೀಡುವ ವೇಳೆ ಸುಪ್ರೀಂ ಕೋರ್ಟ್‌ ಐದು ಪ್ರಮುಖ ಷರತ್ತುಗಳನ್ನು ವಿಧಿಸಿದ್ದು, ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಕಚೇರಿ ಬಳಸುವಂತಿಲ್ಲ ಎಂದು ಹೇಳಿದೆ. ಅದರೊಂದಿಗೆ ಸರ್ಕಾರಿ ಕಡತಗಳಿಗೆ ಸಹಿ ಹಾಕುವ, ಕೇಸ್‌ನ ಕುರಿತಾಗಿ ಸಾರ್ವಜನಿಕವಾಗಿ ಮಾತನಾಡುವ ಕೆಲಸ ಮಾಡಬಾರದು ಎಂದು ತಿಳಿಸಿದೆ.

ನಾನು ನಿಮ್ಮೆಲ್ಲರಿಗೂ ಮೊದಲೇ ಹೇಳಿದ್ದೆ. ಆದಷ್ಟು ಬೇಗ ನಾನು ಬರುತ್ತೇನೆ ಅಂತಾ. ನೋಡಿ ಈಗ ನಾನು ನಿಮ್ಮೆದುರು ಇದ್ದೇನೆ ಎಂದು ಅರವಿಂದ್‌ ಕೇಜ್ರಿವಾಲ್‌ ಬಿಡುಗಡೆಯಾದ ಬಳಿಕ ಮೆರವಣಿಗೆಯಲ್ಲಿ ಹೇಳಿದರು.

 

 

Follow Us:
Download App:
  • android
  • ios